Monday, October 3, 2022

Latest Posts

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಗೆ ಹತ್ಯಾ ಬೆದರಿಕೆ: ವ್ಯಕ್ತಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರಿಗೆ ಕೊಲೆ ಮಾಡುವುದಾಗಿ ವಾಟ್ಸ್‌ಆಪ್ ಸಂದೇಶವೊಂದು ಉತ್ತರಪ್ರದೇಶ ಪೊಲೀಸ್ ಸಹಾಯವಾಣಿ ದೂರವಾಣಿಗೆ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ವಾಟ್ಸ್‌ಆಪ್ ಸಂಖ್ಯೆ 112 ಸಹಾಯವಾಣಿಗೆ ಕೊಲೆ ಬೆದರಿಕೆ ಸಂದೇಶ ಬಂದಿದೆ. ಮುಖ್ಯಮಂತ್ರಿಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಶಂಕಿತ ಶಾಹಿದ್ ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌನ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಶಾಹಿದ್ ವಿರುದ್ಧ ಪೊಲೀಸ್ ಪ್ರಧಾನಿ ಕಚೇರಿಯ ಕಮಾಂಡರ್ ಸುಭಾಸ್ ಕುಮಾರ್ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಂಧನಕ್ಕಾಗಿ ಹಲವು ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿತ್ತು. ಅಲ್ಲದೆ, ಸೈಬರ್ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!