Thursday, March 23, 2023

Latest Posts

ಮಧ್ಯಪ್ರದೇಶ ರಸ್ತೆ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, ಹಲವರ ಸ್ಥಿತಿ ಚಿಂತಾಜನಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸಾವಿನ ಸಂಖ್ಯೆ 14 ಕ್ಕೆ ಏರಿದ್ದು, ಗಾಯಗೊಂಡವರ ಸಂಖ್ಯೆ 56 ಕ್ಕೆ ಏರಿಕೆಯಾಗಿದೆ. ಈ ಪೈಕಿ 39 ಜನರು ರೇವಾ ಜಿಲ್ಲೆಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮುಖೇಶ್ ಶ್ರೀವಾಸ್ತವ ತಿಳಿಸಿದ್ದಾರೆ.

14 ಸಾವುಗಳಲ್ಲಿ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇಬ್ಬರು ಸಿಧಿ ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತು ನಾಲ್ವರು ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಟ್ರಕ್ ಎರಡು ಬಸ್‌ಗಳಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಬಸ್‌ಗಳಲ್ಲಿ ಹಿಂತಿರುಗುತ್ತಿದ್ದರು. ಟ್ರಕ್‌ ಟೈರ್‌ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಬಸ್‌ಗಳಿಗೆ ಡಿಕ್ಕಿ ಹೊಡೆದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮತ್ತು ಸಿಧಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಬಂಧಿಕರಿಗೆ 10 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದರು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಗಳಿಗೆ ತಲಾ 2 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ 1 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!