ಆಫ್ಘಾನಿಸ್ತಾನದಲ್ಲಿ ನಿಲ್ಲದ ಬಾಂಬ್‌ ದಾಳಿ, 33ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಫ್ಘಾನಿಸ್ತಾನದಲ್ಲಿ ಬಾಂಬ್‌ ದಾಳಿ ದುರಂತಗಳು ಎಗ್ಗಿಲ್ಲದೆ ನಡೆಯುತ್ತಿವೆ. ಶಾಲೆ, ಮಸೀದಿಗಳಲ್ಲಿ ಬಾಂಬ್‌ ಸ್ಪೋಟಗೊಂಡು ಹಲವು ನಾಗರೀಕರು ಅಸುನೀಗಿದ್ದಾರೆ. ಇದೀಗ ಮತ್ತೊಂದು ಬಾಂಬ್‌ ದಾಳಿ ನಡೆದಿದ್ದು, ಆಫ್ಗನ್‌ ಪ್ರಜೆಗಳನ್ನು ತಲ್ಲಣಗೊಳಿಸಿದೆ. ಕುಂದುಜ್ ಪ್ರಾಂತ್ಯದ ಮಸೀದಿಯೊಂದರಲ್ಲಿ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಸ್ಫೋಟದಲ್ಲಿ 33 ಜನರು ಸಾವನ್ನಪ್ಪಿದ್ದು, 45 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಮಾಮ್ ಸಾಹಿಬ್ ಜಿಲ್ಲೆಯ ಮೌಲಾವಿ ಸಿಕಂದರ್ ಮಸೀದಿ ಮೇಲೆ ಶುಕ್ರವಾರ (ಏಪ್ರಿಲ್ 22,2022) ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಮೃತರಲ್ಲಿ ಮಕ್ಕಳೂ ಸೇರಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ತಿಳಿಸಿದ್ದಾರೆ. ದಾಳಿಯನ್ನು ಖಂಡಿಸಿದ ತಾಲಿಬಾನ್‌ ಸರ್ಕಾರ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅತಿದೊಡ್ಡ ದಾಳಿಗಳಲ್ಲಿ ಇದು ಒಂದಾಗಿದೆ ಎಂದು ನಿರೀಕ್ಷಿಸಲಾಗಿದೆ. ಇದೂ ಐಸಿಸ್ ಉಗ್ರರ ಕೈವಾಡ ಎಂಬ ಶಂಕೆ ವ್ಯಕ್ತವಾಗಿದೆ. ಅಫ್ಘಾನಿಸ್ತಾನದಲ್ಲಿ ಷಿಯಾ ಮತ್ತು ಸೂಫಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!