Monday, August 8, 2022

Latest Posts

ದೆಹಲಿ-ಮೀರತ್ ಎಕ್ಸ್‌ಪ್ರೆಸ್ ಹೈವೆಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು-ಟ್ರಕ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ಘಟನೆ ನಡೆದಿದೆ.
ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಾಖಂಡದ ಹರಿದ್ವಾರದಿಂದ ಗಾಜಿಯಾಬಾದ್‌ಗೆ ವಾಪಾಸಾಗುವ ವೇಳೆ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss