ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಏರಿಕೆ: 48 ಗಂಟೆಯಲ್ಲಿ 31 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ರೋಗಿಗಳು ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೆ ಏಳು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಏಳು ಮೃತ ರೋಗಿಗಳಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಳೆದ 48 ಗಂಟೆಗಳಲ್ಲಿ ಶಂಕರರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ. ಅದರಲ್ಲೂ 16 ಮಂದಿ ಮಕ್ಕಳು ಹಾಗೂ ನವಜಾತ ಶಿಶುಗಳು ಸೇರಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರ ಸರಕಾರ ಈ ಕುರಿತು ಇಂದು ಸಭೆ ನಡೆಸಲಿದ್ದು, ತನಿಖಾ ಸಮಿತಿಯನ್ನು ರಚಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!