ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ಯಮುನಾನಗರದಲ್ಲಿ ನಕಲಿ ಮದ್ಯ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐದು ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ ಹನ್ನೆರಡಕ್ಕೆ ಏರಿಕೆಯಾಗಿದೆ.
ಮಂಡೇಬರಿ ಹಾಗೂ ಪಂಜೇತಾದ ಮಜ್ರಾ ಹಳ್ಳಿಯಲ್ಲಿ ಮದ್ಯ ಸೇವಿಸಿದ ಬಳಿಕ ಏಕಾಏಕಿ ವಾಂತಿ ಮಾಡಿಕೊಂಡು ಏಳು ಮಂದಿ ಮೃತಪಟ್ಟಿದ್ದರು. ಇದೀಗ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಈ ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಈವರೆಗೆ ಏಳು ಮಂದಿಯನ್ನು ಯಮುನಾಗರ ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ ಅಂಬಾಲಾದಲ್ಲಿ ಅಕ್ರಮವಾಗಿ ಮದ್ಯವನ್ನು ತಯಾರಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಲ್ಲಾನ ಠಾಣಾಧಿಕಾರಿ ಸುರೇಂದರ್ ತಿಳಿಸಿದ್ದಾರೆ.