ಕೇರಳ ಬಾಂಬ್‌ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌‌

ಕೇರಳದಲ್ಲಿನ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿಯ ಕನ್ವೆನ್ಷನ್ ಸೆಂಟರ್ ನಲ್ಲಿ ಅ.29ರಂದು ಸಂಭವಿಸಿದ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದೆ. ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಮೊಲಿ ಜಾಯ್ ಅವರನ್ನು ರಾಜಗಿರಿ ಆಸ್ಪತ್ರೆಯಿಂದ ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿತ್ತು. ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇದರೊಂದಿಗೆ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!