ಹುಣಸೂರಿನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ 6 ಮಂದಿ ಸಾವು

ಹೊಸದಿಗಂತ ವರದಿ,ಮೈಸೂರು:

ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಲ್ ಬೆಟ್ಟದ ಬಳಿ ಸಂಭವಿಸಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಿ ಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟವರು. ಮದುವೆ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಮರಕ್ಕೆ ಡಿಕ್ಕಿ ಹೊಡೆಯಿತು. ಇದರಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಈ 6 ಮಂದಿ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡಿದ್ದ ಮೂವರನ್ನ ಹುಣಸೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ಗ್ರಾಮಾಂತರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!