ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಈ ದುರಂತದಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಮುಂಜಾನೆ ಭಯಾನಕ ಭೂಕುಸಿತಕ್ಕೆ ವಯನಾಡ್ ಸಾಕ್ಷಿಯಾಗಿದೆ. ಈ ದುರಂತದಲ್ಲಿ 70ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ ಅನ್ನೋ ಮೂಲಕ ಬೆಚ್ಚಿ ಬೀಳೋ ಮಾಹಿತಿಯನ್ನು ರಾಹುಲ್ ಗಾಂಧಿ ಅವರು ಬಹಿರಂಗಪಡಿಸಿದ್ದಾರೆ. ಕೇಂದ್ರ ಸರ್ಕಾರ ಈ ಕೂಡಲೇ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಸಾಧ್ಯವಾದಷ್ಟು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ 50ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ. 250ಕ್ಕೂ ಹೆಚ್ಚು ಮಂದಿ ಪ್ರವಾಹದಲ್ಲಿ ಸಿಲುಕಿದ್ದಾರೆ ಎನ್ನಲಾಗಿತ್ತು. ಆದರೆ ಕೇರಳದ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದಿರುವ ರಾಹುಲ್ ಗಾಂಧಿ ಅವರು ವಯನಾಡ್ ಭೂಕುಸಿತದಲ್ಲಿ 70 ಮಂದಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಬಹಿರಂಗಪಡಿಸಿದ್ದಾರೆ.