ಬ್ರೆಜಿಲ್‌ ನಲ್ಲಿ ಭಾರೀ ಪ್ರವಾಹ, ಭೂಕುಸಿತ: 78 ಜನರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬ್ರೆಜಿಲ್‌ ನಲ್ಲಿನ ಪೆಟ್ರೋಪೊಲೀಸ್‌ ನಲುಂಟಾದಲ್ಲಿ ಸಂಭವಿಸಿದ ಭಾರೀ ಪ್ರವಾಹಕ್ಕೆ ಕನಿಷ್ಠ 78 ಮಂದಿ ಮೃತಪಟ್ಟಿದ್ದಾರೆ.
ಸತತ ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಲವೆಡೆ ಭೂಕುಸಿತವಾಗಿದ್ದು, ಬೀದಿಗಳು ನೀರಿನಿಂದ ತುಂಬಿದ್ದು, ಮನೆಗಳು ಕೊಚ್ಚಿ ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದಾಗಿ ಕಟ್ಟಡ ಅವಶೇಷಗಳ ಅಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಕನಿಷ್ಠ 21 ಮಂದಿಯನ್ನು ರಕ್ಷಿಸಲಾಗಿದ್ದು, 78 ಮಂದಿಯ ಮೃತ ದೇಹ ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 300 ಜನರನ್ನು ನಿರಾಶ್ರಿತರ ಶಿಬಿರದಲ್ಲಿ ಇರಿಸಲಾಗಿದೆ, ಹೆಚ್ಚಾಗಿ ಶಾಲೆಗಳಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಬ್ರೆಜಿಲ್‌ ನಲ್ಲಿ ಸಂಭವಿಸುತ್ತಿರುವ ದುರಂತಗಳಲ್ಲಿ ಇದು ಕೂಡ ಒಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!