ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಈ ಘಟನೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ನಾಂಪಲ್ಲಿಯ ಬಜಾರ್ ಘಾಟ್ ನಲ್ಲಿರುವ ರಾಸಾಯನಿಕ ಗೋದಾಮಿನಲ್ಲಿ ಇಂದು ಬೆಳಗ್ಗೆ ಈ ಅವಘಡ ನಡೆದಿದ್ದು, ಈವರೆಗೆ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಗೋದಾಮಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಘಟನೆಯ ವಿವರ
ರಾಸಾಯನಿಕ ವಸ್ತುಗಳನ್ನು ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಕಟ್ಟಡದ ನಾಲ್ಕೂ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿ ಕಾರು ರಿಪೇರಿ ಮಾಡುವಾಗ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಅಲ್ಲಿದ್ದ ರಾಸಾಯನಿಕ ವಸ್ತುಗಳಿಗೆ ಬೆಂಕಿ ತಗುಲಿ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಕ್ಕೆ ವ್ಯಾಪಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.