ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊರಾಕೊದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದಾಗಿ ಮೃತರ ಸಂಖ್ಯೆ 600ಕ್ಕೆ ಏರಿಕೆಯಾಗಿದೆ. ಅಲ್ಲದೆ ಈ ದುರಂತದಲ್ಲಿ ಗಾಯಗೊಂಡವರ ಸಂಖ್ಯೆ 300ಕ್ಕೆ ಏರಿದೆ ಎಂದು ಆಂತರಿಕ ಸಚಿವಾಲಯವು ಮಾಹಿತಿ ನೀಡಿದೆ.
ಮೊರಾಕ್ಕೊದ ಮರಕೇಶ್ನ ನೈಋತ್ಯಕ್ಕೆ 44 ಮೈಲಿ ದೂರದಲ್ಲಿ ಶುಕ್ರವಾರ ರಾತ್ರಿ 11:11 ಕ್ಕೆ 18.5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಭೂಕಂಪನದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಈವರೆಗೆ 600ಕ್ಕೂ ಅಧಿಕ ಮಂದಿ ಸಾವು ಮತ್ತು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.