Wednesday, August 17, 2022

Latest Posts

ರಾಮನ ದರ್ಶನಕ್ಕೂ ಮುನ್ನ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಆರು ಮಂದಿ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸರಯೂ ನದಿಯ ಗುಪ್ತರ್ ಘಾಟ್‌ನಲ್ಲಿ ಸ್ನಾನ ಮಾಡಲು ಇಳಿದಿದ್ದು, ಒಂದೇ ಕುಟುಂಬದ ಆರು ಮಂದಿ ನಾಪತ್ತೆಯಾಗಿದ್ದಾರೆ.

ಲಖನೌ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಆಗಮಿಸಿದ್ದು, ಆರು ಶವಗಳನ್ನು ಹೊರತೆಗೆದಿದ್ದಾರೆ. ಇನ್ನು ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ.

ಆಗ್ರಾದಿಂದ ಒಂದೇ ಕುಟುಂಬದ 15 ಮಂದಿ ಅಯೋಧ್ಯೆಯ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದರು. ಸರಯೂ ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಕೆಲವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರನ್ನು ರಕ್ಷಿಸಲು ಹೋದವರು ಕೂಡ ಕೊಚ್ಚಿಹೋಗಿದ್ದಾರೆ.

ಸ್ಥಳೀಯರ ಸಹಾಯದಿಂದ ಆರು ಮಂದಿಯನ್ನು ರಕ್ಷಿಸಲಾಗಿದೆ. ಇನ್ನು ಆರು ಮಂದಿಯ ಮೃತದೇಹ ದೊರೆತಿದ್ದು, ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ.

ಲಲಿತ್, ಪಂಕಜ್, ಶ್ರುತಿ, ರಾಜ್‌ಕುಮಾರಿ, ಸೀತಾ ಮತ್ತು ದೃಷ್ಟಿ ಮೃತರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!