Sunday, January 11, 2026

ಸಾಲಬಾಧೆ-ಕೌಟುಂಬಿಕ ಕಲಹ: ಬೆಂಕಿಗಾಹುತಿಯಾದ ಮಾಜಿ ಕಾರ್ಪೊರೇಟರ್ ಬದುಕು

ಹೊಸದಿಗಂತ ದಾವಣಗೆರೆ:

ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡ ಹಾಗೂ ಮಹಾನಗರ ಪಾಲಿಕೆಯ 43ನೇ ವಾರ್ಡ್‌ನ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ್ (56) ಅವರು ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ. ತಾಲೂಕಿನ ಬಿಸ್ಲೇರಿ ಗ್ರಾಮದ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಅವರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಮೃತ ಚಂದ್ರಶೇಖರ್ ಅವರು ಸಿಮೆಂಟ್ ಮತ್ತು ಕಬ್ಬಿಣದ ವ್ಯಾಪಾರ ನಡೆಸುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಶಾಮನೂರು ಆಂಜನೇಯ ದೇವಸ್ಥಾನದ ಟ್ರಸ್ಟಿಯಾಗಿದ್ದ ಅವರು ಸಮಾಜದಲ್ಲಿ ಉತ್ತಮ ಹೆಸರು ಹೊಂದಿದ್ದರು.

ಪ್ರಾಥಮಿಕ ವರದಿಗಳ ಪ್ರಕಾರ, ಚಂದ್ರಶೇಖರ್ ಅವರು ತೀವ್ರವಾದ ಸಾಲಬಾಧೆಗೆ ಸಿಲುಕಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಮನೆಯಲ್ಲಿ ತೀವ್ರ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಇದರಿಂದ ಮನನೊಂದ ಅವರ ಪುತ್ರ ನರೇಶ್ (22) ಮತ್ತು ಪುತ್ರಿ ಪವಿತ್ರಾ (24) ಅವರು ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಸ್ತುತ ಮಕ್ಕಳಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳ ಈ ನಿರ್ಧಾರದಿಂದ ಕಂಗೆಟ್ಟಿದ್ದ ಚಂದ್ರಶೇಖರ್ ಅವರು, ಶನಿವಾರ ತಡರಾತ್ರಿ ಬಿಸ್ಲೇರಿ ಗ್ರಾಮದ ಬಳಿ ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕಾರಿನೊಂದಿಗೆ ಮೃತದೇಹ ಸಂಪೂರ್ಣ ಭಸ್ಮವಾಗಿದೆ. ಈ ಸಂಬಂಧ ಹದಡಿ ಮತ್ತು ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಎ

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!