ಸಾಲದ ಸುಳಿಯಲ್ಲಿ ದ್ವೀಪ ರಾಷ್ಟ್ರ: ಆಹಾರ, ಔಷಧಿ, ಇಂಧನ ಅಗತ್ಯ ವಸ್ತುಗಳ ಖರೀದಿಗೂ ಹೆಣಗಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್ಥಿಕ ಬಿಕ್ಕಟ್ಟಿನಿಂದ ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರಗಳನ್ನು ರಕ್ಷಿಸುವತ್ತ ಹೆಚ್ಚಿನ ಗಮನಹರಿಸಬೇಕೆಂದು ಶ್ರೀಲಂಕಾ ಪ್ರಧಾನಿ ದಿನೇಶ್ ಗುಣವರ್ಧನ ಅವರು ಅಂತಾರಾಷ್ಟ್ರೀಯ ಆರ್ಥಿಕ ಹಣಕಾಸು ನಿಧಿ ತಂಡಕ್ಕೆ ಮನವಿ ಮಾಡಿದ್ದಾರೆ.

ಶ್ರೀಲಂಕಾದ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು, ಲಕ್ಷಾಂತರ ಜನರು ಆಹಾರ, ಔಷಧಿ, ಇಂಧನ ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೆಣಗಾಡುತ್ತಿದ್ದಾರೆ. ದ್ವೀಪ ರಾಷ್ಟ್ರವು ಪ್ರಸ್ತುತ ಅಂತಾರಾಷ್ಟ್ರೀಯ ಆರ್ಥಿಕ ಹಣಕಾಸು ನಿಧಿಯೊಂದಿಗೆ ಬೆಲ್‌ಔಟ್ ಕಾರ್ಯಕ್ರಮದಲ್ಲಿ ಸಿಬ್ಬಂದಿ ಮಟ್ಟದ ಒಪ್ಪಂದ ಮಾಡಿಕೊಳ್ಳಲು ಪರದಾಡುತ್ತಿದೆ. ಈ ಹಿನ್ನಲೆ ಪ್ರಧಾನಿ ಅವರು ಐಎಮ್‌ಎಫ್ ಅಧಿಕಾರಿಗಳನ್ನು ಭೇಟಿಯಾದಾಗ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು ದೇಶದ ಆರ್ಥಿಕ ಸವಾಲುಗಳು ಮತ್ತು ಆದಾಯ ಕಡಿಮೆ ಇರುವಂತಹ ಜನರ ತೊಂದರೆಗಳನ್ನು ಕಡಿಮೆ ಮಾಡಲು ಹಾಗೂ ಅನಗತ್ಯ ಆಮದು ಕಡಿಮೆ ಮಾಡಲು ಮತ್ತು ರಫ್ತು ಉತ್ಪನ್ನಗಳನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಐಎಮ್‌ಎಫ್‌ಗೆ ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!