Sunday, December 3, 2023

Latest Posts

ಸಾಲಬಾಧೆ: ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಹೊಸದಿಗಂತ ವರದಿ,ತುಮಕೂರು:

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಚಲಿಸುತ್ತಿರುವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಪಂಡಿತನಹಳ್ಳಿ ರೈಲ್ವೇ ಗೇಟ್ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.

ನಗರದ ಮರಳೂರು ವಾಸಿಗಳಾದ ಸಿದ್ಧಗಂಗಯ್ಯ(62), ಸುನಂದಮ್ಮ(50), ಮಗಳು ಗೀತಾ (30) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಯಲ್ಲಿ ನಿವೃತ್ತಿ ಹೊಂದಿದ್ದ ಸಿದ್ದಗಂಗಯ್ಯ,ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ನಡೆಸುತ್ತಿದ್ದು ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆನ್ನಲಾಗಿದೆ.

ಸೋಮವಾರ ಬೆಳಗ್ಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನಿಸಲಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು , ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!