ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಮುಂದಿನ ನಡೆಯ ಬಗ್ಗೆ ಪ್ರಧಾನಿ ನಿವಾಸದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ಸಿಡಿಎಸ್, ಮೂರು ಸೇನಾ ಮುಖ್ಯಸ್ಥರನ್ನು ಒಳಗೊಂಡ ಮಹತ್ವದ ತುರ್ತು ಸಭೆ ಪೂರ್ಣಗೊಂಡಿದ್ದು, ಈ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಆಧರಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಸುಮಾರು ಒಂದೂವರೆ ತಾಸುಗಳ ಕಾಲ ನಡೆದ ಈ ಸಭೆಯಲ್ಲಿ ಗುರಿ, ಸಮಯ ನೀವೇ ನಿರ್ಧರಿಸಿ ಎಂದು ಪ್ರಧಾನಿ ಸಶಸ್ತ್ರ ಪಡೆಗಳಿಗೆ ಹೇಳಿದ್ದಾರೆ.
ಸೇನೆ ಸಾಮರ್ಥ್ಯದಲ್ಲಿ ನಮಗೆ ಪೂರ್ಣ ವಿಶ್ವಾಸವಿದೆ. ಪಹಲ್ಗಾಮ್ ದಾಳಿಗೆ ಯಾವ ರೀತಿಯಲ್ಲಿ ಉತ್ತರ ನೀಡಬೇಕು, ಗುರಿ ಹಾಗೂ ಸಮಯ ಯಾವುದಿರಬೇಕು ಎಂಬುದನ್ನು ಸೇನೆಯೇ ನಿರ್ಧರಿಸಬೇಕು ಎಂದು ಪ್ರಧಾನಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.