ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ರೈ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸುತ್ತೇನೆ. ಪಕ್ಷದ ಎಲ್ಲಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇವೆ, ಸೋತಿದ್ದೇನೆ, ಪರವಾಗಿಲ್ಲ, ಜನರ ಸೇವೆಯೇ ನನಗೆ ಮುಖ್ಯ. ಹೈಕಮಾಂಡ್ ತೀರ್ಮಾನಕ್ಕೆ ಸದಾ ಬದ್ಧ ಎಂದು ಹೇಳಿದ್ದಾರೆ.