Monday, August 8, 2022

Latest Posts

ಹಿಜಾಬ್‌ ವಿವಾದ: ಶಾಲಾ-ಕಾಲೇಜು ರಜೆ ವಿಸ್ತರಣೆ ಕುರಿತು ಇಂದು ಸಂಜೆ ತೀರ್ಮಾನ- ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಸಂಜೆ ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರ ಜತೆ ಚರ್ಚೆ ನಡೆಸಿ ಶಾಲಾ ಕಾಲೇಜುಗಳ ರಜೆ ವಿಸ್ತರಣೆ ಕುರಿತು ತೀರ್ಮಾನಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಆರ್. ಟಿ. ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆ ಕಾಲೇಜುಗಳಲ್ಲಿ ಯಾವ ರೀತಿ ಶಾಂತಿ, ಸೌಹಾರ್ದತೆ ತರಬೇಕು ಎನ್ನುವುದರ ಬಗ್ಗೆ ಇಂದು ಸಂಚೆ ಸಚಿವರ ಜತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಹಿಜಾಬ್‌ – ಕೇಸರಿ ಶಾಲು ವಿವಾದ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಯಲಿದೆ.
ಈ ಬಗ್ಗೆ ವಿಶೇಷ ಪೀಠ ರಚನೆ ಮಾಡಲಾಗಿದ್ದು, ಅದರಲ್ಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಇರಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss