ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರ ಸುರಕ್ಷತೆಗಾಗಿ ಭಾರತೀಯ ರೈಲ್ವೆ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದು, ಇದೀಗ ರೈಲ್ವೆ ನಿಲ್ದಾಣಗಳಲ್ಲಿ ಔಷಧ ಪೂರೈಕೆ ಸರ್ಕಾರ ಮುಂದಾಗಿದೆ.
ಪ್ರಾಯೋಗಿಕ ಹಂತವಾಗಿ 50 ರೈಲ್ವೆ ನಿಲ್ದಾಣಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಕರ್ನಾಟಕದ ನಾಲ್ಕು ರೈಲ್ವೆ ನಿಲ್ದಾಣಗಳು ಈ ಪಟ್ಟಿಯಲ್ಲಿ ಸೇರಿವೆ.
ರೈಲ್ವೆ ನಿಲ್ದಾಣಗಳಲ್ಲಿ ಔಷಧ ದೊರೆಯುವುದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಬೈಯಪ್ಪನಹಳ್ಳಿಯ ಎಸ್‌ಎಂವಿಟಿ ರೂಲ್ವೆ ನಿಲ್ದಾಣ, ಬಂಗಾರಪೇಟೆ, ಹುಬ್ಬಳ್ಳಿ ಜಂಕ್ಷನ್ ಹಾಗೂ ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಜನೌಷಧಿ ಮಳಿಗಗಳು ತೆರೆಯಲಿವೆ.
ಫಾರ್ಮಸಿ ಓದಿದ ಯಾರಾದರೂ ಕೇಂದ್ರಗಳನ್ನು ತೆರೆಯಲು ಅವಕಾಶ ಇದೆ. ರೈಲ್ವೆ ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ಆನ್‌ಲೈನ್‌ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತದೆ.