ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಿಸಲು ನಿರ್ಧಾರ: ಸಚಿವ ಬೊಮ್ಮಾಯಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಿಎಸ್ಸಿ ಅಗ್ರಿ ಮತ್ತು ಸರಿ ಸಮಾನ ಕೋರ್ಸ್ ಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಈ ಕುರಿತಾಗಿ ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿಎಸ್ಸಿ ಅಗ್ರಿಕಲ್ಚರ್ ಮತ್ತು ಸರಿ ಸಮಾನ ಕೋರ್ಸ್ ಗಳಲ್ಲಿ ರೈತರ ಮಕ್ಕಳಿಗೆ ಶೇಕಡ 40 ರಿಂದ 50 ರಷ್ಟು ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.
ಇನ್ನು ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ 193.65 ಕೋಟಿ ರೂಪಾಯಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಆಡಳಿತ ಸೌಧ ಮತ್ತು ಇತರೆ ನಿರ್ಮಾಣ ಕಾಮಗಾರಿಗೆ 110 ಕೋಟಿ ರೂಪಾಯಿ ನೀಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಮೈಸೂರು ಮೆಡಿಕಲ್ ಕಾಲೇಜಿಗೆ 154 ಕೋಟಿ ರೂ. ಪರಿಷ್ಕೃತ ಯೋಜನೆಗೆ ಅನುಮೋದನೆ ನೀಡಲಾಗಿದೆ. 100 ಪೊಲೀಸ್ ಠಾಣೆಗಳ ನಿರ್ಮಾಣಕ್ಕೆ 200 ಕೋಟಿ ರೂ, ನೀಡಲು ಅನುಮೋದನೆ ನೀಡಲಾಗಿದೆ.
ಅಂಕೋಲ ತಾಲ್ಲೂಕಿನಲ್ಲಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಸಾದಿಲ್ವಾರು ನಿಧಿ 2500 ಕೋಟಿ ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ. ಭಟ್ಕಳ ಮತ್ತು ಚಳ್ಳಕೆರೆ ಮಿನಿ ವಿಧಾನಸೌಧ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss