ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಅಗತ್ಯ ಸೇವೆಗಳಿಗೆ ಇದರಿಂದ ಸಮಸ್ಯೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ನಡೆದ ಸಭೆ ಇದೀಗ ಅಂತ್ಯಗೊಂಡಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದ್ದೇವೆ, ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.