Monday, September 1, 2025

ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್,ವಿಮಾನ ಸೇವೆ ಗುತ್ತಿಗೆ ಪಡೆಯಲು ನಿರ್ಧಾರ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ಮುಂದೆ ಸರ್ಕಾರಿ ಕೆಲಸಗಳಿಗೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಷ್ಟು ದಿನ ಗಂಟೆಗಳ ಅವಧಿಯಲ್ಲಿ ಹೆಲಿಕಾಪ್ಟರ್/ವಿಶೇಷ ವಿಮಾನ ಗುತ್ತಿಗೆ ಪಡೆಯಲಾಗುತ್ತಿತ್ತು. ಆದ್ರೆ, ಇನ್ಮುಂದೆ ಗಂಟೆಗಳ ಅವಧಿ ಬದಲಾಗಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್ ಹಾಗೂ ವಿಮಾನ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ.

ಸರ್ಕಾರಿ ಕೆಲಸಗಳ ಸಂಬಂಧ ಓಡಾಡಲು ಇಷ್ಟು ದಿನ ಗಂಟೆಗಳ ಅವಧಿಯಲ್ಲಿ ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನಗಳನ್ನು ಗುತ್ತಿಗೆ ಪಡೆಯಲಾಗುತ್ತಿತ್ತು. ಆದ್ರೆ, ಗಂಟೆ ಆಧಾರದಲ್ಲಿ ಸರಕಾರದ ಬೊಕ್ಕಸದಿಂದ 28 ಕೋಟಿ ಖರ್ಚಾಗುತ್ತಿತ್ತು. ಮತ್ತೆ ಸಮಯಕ್ಕೆ ಸರಿಯಾಗಿ ಹೆಲಿಕಾಪ್ಟರ್ ಸೇವೆ ಲಭ್ಯವಿರುತ್ತಿರಲಿಲ್ಲ. ಇದರಿಂದ ಗಂಟೆಗಳ ಅವಧಿ ಗುತ್ತಿಗೆಯನ್ನು ಕೈ ಬಿಟ್ಟು ವಾರ್ಷಿಕವಾಗಿ ಗುತ್ತಿಗೆ ಪಡೆಯಲು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನವಾಗಿದೆ. ವಾರ್ಷಿಕ ಗುತ್ತಿಗೆಯಿಂದ ಸಮಯಕ್ಕೆ ಸರಿಯಾಗಿ ಹೆಲಿಕಾಪ್ಟರ್ ಹಾಗೂ ವಿಮಾನ ಸೇವೆ ಸಿಗಲಿದೆ ಎನ್ನುವುದಕ್ಕಾಗಿಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸೂಕ್ತ ತರಬೇತಿ ಹೊಂದಿರುವ ಸಂಸ್ಥೆಗಳಿಗೆ ಟೆಂಡರ್ ನಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ