ವಿಧಾನಸೌಧದಲ್ಲಿ ಪುಸ್ತಕ ಮೇಳ, ಸಾಹಿತ್ಯ ಹಬ್ಬ ಆಯೋಜನೆಗೆ ತೀರ್ಮಾನ: ಯು‌.ಟಿ ಖಾದರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಫೆಬ್ರವರಿ 28, ಮಾರ್ಚ್ 1 ಮತ್ತು 2 ರಂದು ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜನೆಯಾಗಿದೆ. ಪುಸ್ತಕ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.

ಅಲ್ಲದೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಪುಸ್ತಕ ಖರೀದಿ ಮಾಡಿ ಸರ್ಕಾರಿ ಕಾಲೇಜು, ಪ್ರೌಢಶಾಲೆಗಳಿಗೆ ನೀಡಲು ಅವಕಾಶ ಇದೆ. ಮಾರ್ಚ್ 3 ರಂದು ಜಂಟಿ ಅಧಿವೇಶನ ನಡೆಯಲಿದೆ. ಅಂದು ರಾಜ್ಯಪಾಲರ ಭಾಷಣ ಇರೋದ್ರಿಂದ ಮಧ್ಯಾಹ್ನದ ಬಳಿಕ ಪುಸ್ತಕ ಮೇಳಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!