ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಜಾತಿಗಣತಿ ಮರು ಸರ್ವೇ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, 90 ದಿನದೊಳಗೆ ಜಾತಿ ಗಣತಿ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಮಾತನಾಡಿದ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಸಮಯದಲ್ಲಿ ಹಾಗೂ ಪಕ್ಷದ ಕಾರ್ಯನಿರ್ವಹಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶಿಸುವುದಿಲ್ಲ ತಿಳಿಸಿದ್ದಾರೆ. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷವಾಗಿದ್ದು, ಮತ್ತೊಮ್ಮೆ ಸಮೀಕ್ಷೆ ನಡೆಸಲು ಒಪ್ಪಿಗೆ ನೀಡಲಾಗಿದ್ದು, 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!