January18, 2026
Sunday, January 18, 2026
spot_img

ಸರ್ಕಾರಿ ಕೆಲಸಗಳಿಗೆ ಬಾಡಿಗೆ ಹೆಲಿಕಾಪ್ಟರ್ ಬಳಕೆಗೆ ನಿರ್ಧಾರ! ಶೀಘ್ರದಲ್ಲೇ ಟೆಂಡರ್‌ಗೆ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಕುರಿತು ಕಟ್ಟುನಿಟ್ಟಿನ ಮಾನದಂಡ ರೂಪಿಸಿ ಟೆಂಡರ್ ಮೂಲಕವೇ ಹೆಲಿಕಾಪ್ಟರ್‌ ಹಾಗೂ ವಿಮಾನಗಳ ಸೇವೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೆಲಿಕಾಪ್ಟರ್‌ ಹಾಗೂ ವಿಮಾನ ಬಳಕೆ ಕುರಿತು ನಿರ್ದಿಷ್ಟ ಮಾನದಂಡ ರೂಪಿಸುವ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಜತೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸಭೆ ನಡೆಸಿದರು.

ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಡಿಕೆ.ಶಿವಕುಮಾರ್ , ಈ ಸಂಬಂಧ ಹಲವಾರು ವರ್ಷಗಳಿಂದ ಸರ್ಕಾರದ ಮುಂದೆ ಪ್ರಸ್ತಾವನೆ ಬಾಕಿ ಇದೆ. ಇದಕ್ಕಾಗಿ ಟೆಂಡರ್‌ಗಳನ್ನು ಆಹ್ವಾನಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಇತರ ರಾಜ್ಯಗಳಲ್ಲಿ ಈ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಹೆಲಿಕಾಪ್ಟರ್‌ಗಳು ಮತ್ತು ವಿಶೇಷ ಜೆಟ್‌ಗಳನ್ನು ಈಗ ಗಂಟೆಯ ಆಧಾರದ ಮೇಲೆ ಬಾಡಿಗೆಗೆ ಪಡೆಯಲಾಗುತ್ತಿದ್ದು, ಸಭೆಯಲ್ಲಿ, ಗಂಟೆಯ ಆಧಾರದ ಬದಲಿಗೆ ಗುತ್ತಿಗೆ ಆಧಾರದ ಮೇಲೆ ಹೆಲಿಕಾಪ್ಟರ್ ಬಾಡಿಗೆಗೆ ಪಡೆಯಲು ಟೆಂಡರ್‌ಗಳನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿವೆ.

ಸಚಿವರ ರಾಜ್ಯ ಪ್ರವಾಸಕ್ಕಾಗಿ ಸರ್ಕಾರವು ಗಂಟೆಗೆ 1 ಲಕ್ಷ ರೂ. ವೆಚ್ಚದಲ್ಲಿ ಹೆಲಿಕಾಪ್ಟರ್‌ಗಳು ಮತ್ತು ವಿಮಾನಗಳನ್ನು ಬಾಡಿಗೆಗೆ ಪಡೆಯುತ್ತಿದೆ. ದೆಹಲಿ ಭೇಟಿಗಳಿಗಾಗಿ ಹೆಚ್ಚಾಗಿ ವಾಣಿಜ್ಯ ವಿಮಾನಗಳನ್ನು ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಸಚಿವರ ಪ್ರಯಾಣವನ್ನು ಆರಾಮದಾಯಕವಾಗಿರಲು ಸರ್ಕಾರ ಮುಂದಾಗಿದೆ.

Must Read

error: Content is protected !!