ಕನ್ನಡಪರ ಸಂಘಟನೆ, ಹೋರಾಟಗಾರರ ಮೇಲಿನ ಸುಳ್ಳು ಕೇಸ್ ವಾಪಸ್ ಗೆ ನಿರ್ಧಾರ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಲು ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಹಿತಿಗಳು ಮತ್ತು ಚಿಂತಕರನ್ನೊಳಗೊಂಡ ಸಮಾನ ಮನಸ್ಕರ ಗುಂಪು ಸಿಎಂ ಗೃಹ ಕಚೇರಿಯಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದ ವೇಳೆ ಈ ಹೇಳಿಕೆಯನ್ನು ಸಿಎಂ ನೀಡಿದ್ದಾರೆ.

ಕನ್ನಡಪರ ಹೋರಾಟಗಾರರು, ರೈತರು, ಕಾರ್ಮಿಕರು, ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್‌ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದರು. ಉಳಿದಂತೆ ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ , ಈ‌ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸಿ ಭರವಸೆ ನೀಡುತ್ತೇನೆ ಎಂದು ಸಿಎಂ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!