spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗ್ರಾಮ ಪಂಚಾಯತ್ ಸಿಬ್ಬಂದಿಗಳು ‘ಕೊರೋನಾ ವಾರಿಯರ್ಸ್’ಗಳೆಂದು ಘೋಷಣೆ: ರಾಜ್ಯ ಸರ್ಕಾರ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ನೌಕರರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಗಳುಎಂಬುದಾಗಿ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ( ಪಂ.ರಾಜ್) ಉಮಾ ಮಹಾದೇವನ್ ನಡವಳಿಗಳನ್ನು ಹೊರಡಿಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅತ್ಯಗತ್ಯ ಸೇವೆಗಳನ್ನು ನೀಡುವ ಇಲಾಖೆಯಾಗಿದ್ದು, ಈ ಇಲಾಖೆಯ ಅಧಿಕಾರಿಗಳು, ನೌಕರರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಕೋವಿಡ್-19 ನಿರ್ವಹಣೆಯ ಮುಂಚೂಣಿಯಲ್ಲಿದ್ದು, ಸಾರ್ವಜನಿಕರಿಗೆ ಅವಶ್ಯಕವಿರುವ ಸೇವೆಗಳನ್ನು ನೀಡುತ್ತಿದ್ದಾರೆ.
ಈಗಾಗಲೇ ಇಂತಹ ಕರ್ತವ್ಯ ನಿರ್ವಹಿಸುತ್ತಿರುವ ಕೆಲವೊಂದು ಇಲಾಖೆ ಅಧಿಕಾರಿ, ನೌಕರರನ್ನು ಕೊರೋನಾ ವಾರಿಯರ್ಸ್ ಗಳೆಂದು ಘೋಷಿಸಲಾಗಿದೆ. ಅದರಂತೆ ಗ್ರಾಮೀಣಾಭಿವೃದ್ಧಿ, ಗ್ರಾಮ ಪಂಚಾಯ್ತಿ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಗಳೆಂದು ಘೋಷಿಸುವಂತೆ ಮುಖ್ಯಮಂತ್ರಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ನೌಕರುಗಳಿಗೆ ನೀಡಲು ಸೂಚಿಸಿರುತ್ತಾರೆ.
ಈ ಅಂಶಗಳ ಹಿನ್ನಲೆಯಲ್ಲಿ, ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡ ಇಲಾಖೆಯ ಅಧಿಕಾರಿ ಮತ್ತು ನೌಕರರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಗುರುತಿಸಿ, ಸದರಿ ಅಧಿಕಾರಿ, ನೌಕರರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಕೊರೋನಾ ಕರ್ತವ್ಯ ನಿರ್ವಹಣೆ ವೇಳೆ ಕೋವಿಡ್ ಸೋಂಕಿನಿಂದ ಮರಣ ಹೊಂದಿದಲ್ಲಿ, ಅವರ ಕುಟುಂಬದವರಿಗೆ ಪರಿಹಾರ ನೀಡಲು, ವೈದ್ಯಕೀಯ ವೆಚ್ಚ ಭರಿಸಲು ಅರ್ಹರಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss