ಪಾಕಿಸ್ತಾನದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರಿ ಮಳೆ, ಪ್ರವಾಹದಿಂದಾಗಿ ತತ್ತರಿಸಿರುವ ಪಾಕಿಸ್ತಾನದಲ್ಲಿ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.
ಪ್ರವಾಹದ ಹೊಡೆತಕ್ಕೆ ಪಾಕಿಸ್ತಾನದಲ್ಲಿ 343 ಮಕ್ಕಳು ಸೇರಿದಂತೆ 1000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 30 ಮಿಲಿಯನ್ ಜನರು ನಿರಾಶ್ರಿತರಾಗಿದ್ದಾರೆ.
ಬಲೂಚಿಸ್ತಾನದಲ್ಲಿ 243, ಖೈಬರ್ ಪಖ್ತುಂಕ್ವಾದಲ್ಲಿ 185, ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ 35, ಪ್ರಾಂತ್ಯದಲ್ಲಿ 165 ಜನರು ಸೇರು ಸಾವನ್ನಪ್ಪಿದ್ದಾರೆ.
ಎನ್ ಡಿಎಂಎ ವರದಿ ಪ್ರಕಾರ, ಪಾಕಿಸ್ತಾನದಲ್ಲಿ ಆಗಸ್ಟ್‌ನಲ್ಲಿ ಈವರೆಗೆ 166.8 ಮಿಮೀ ಮಳೆಯಾಗಿದೆ. ಸರಾಸರಿ 48 ಮಿಮೀ ಮಳೆಗಿಂತ ಶೇ.241 ರಷ್ಟು ಹೆಚ್ಚು ಮಳೆಯಾಗಿದ್ದು, ಸಿಂಧ್ ಮತ್ತು ಬಲೂಚಿಸ್ತಾನ್ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ. ಪ್ರವಾಹದ ಸಂಕಷ್ಟಕ್ಕೆಸಿಲುಕಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!