ಗೋವನ್ನು ಸಂರಕ್ಷಿತ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ : ಕೇಂದ್ರಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಗೋಹತ್ಯೆ ನಿಷೇಧಿಸಲು ಮತ್ತು ಅದನ್ನು ‘ಸಂರಕ್ಷಿತ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಹೇಳಿದೆ.

‘ನಮ್ಮದು ಜಾತ್ಯತೀತ ದೇಶ. ಇಲ್ಲಿ ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಹಿಂದೂ ಧರ್ಮದಲ್ಲಿ ಗೋವು ದೈವಿಕ ಸ್ಥಾನ ಹೊಂದಿದೆ. ಅಲ್ಲದೇ ಗೋವು ಪರೋಪಕಾರದ ಪ್ರಾಣಿಯಾಗಿದೆ. ಆದ್ದರಿಂದ ಅದನ್ನು ರಕ್ಷಿಸಬೇಕು ಮತ್ತು ಪೂಜಿಸಬೇಕು’ ಎಂದು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಹೇಳಿದರು.

ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯ್ದೆ– 1955 ರ ಅಡಿಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಮನವಿಯನ್ನು ವಜಾಗೊಳಿಸುವ ವೇಳೆ ನ್ಯಾಯಮೂರ್ತಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಪೊಲೀಸರು ತನ್ನ ವಿರುದ್ಧ ಪ್ರಕರಣ ದಾಖಲಿಸಿದ್ದು, ಕೆಳಹಂತದ ನ್ಯಾಯಾಲಯದಲ್ಲಿ ತನ್ನ ವಿರುದ್ಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರಾದ ಮೊಹಮ್ಮದ್ ಅಬ್ದುಲ್ ಖಾಲಿಕ್ ಮನವಿ ಮಾಡಿದ್ದರು.

ಅರ್ಜಿಯನ್ನು ವಜಾಗೊಳಿಸಿದ ಪೀಠ, ದಾಖಲಾದ ವಾಸ್ತವಾಂಶಗಳ ಆಧಾರದ ಮೇಲೆ ಅರ್ಜಿದಾರರ ವಿರುದ್ಧ ಪ್ರಕರಣ ಹೂಡಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!