ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೂಡಲೇ ಡೆಂಗ್ಯೂವನ್ನು ತುರ್ತು ಪರಿಸ್ಥಿತಿ ಎಂದು ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಸರ್ಕಾರ ಪ್ರತಿ ತಾಲೂಕಿನಲ್ಲಿ ಟಾಸ್ಕ್‌ಫೋರ್ಸ್ ರಚಿಸಿ ಔಷಧಿ ಪೂರೈಸುವ, ರೋಗ ನಿಯಂತ್ರಿಸುವ ಕ್ರಮಗಳನ್ನು ವಹಿಸಬೇಕಿತ್ತು.ಈ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. 2 ಲಕ್ಷಕ್ಕೂ ಅಧಿಕ ಮಂದಿ ಡೆಂಗ್ಯೂಗೆ ಒಳಗಾಗಿದ್ದಾರೆ. ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದರು. ರಾಜ್ಯದಲ್ಲಿ ಡೆಂಗ್ಯೂ ರೋಗ ವೇಗವಾಗಿ ಹರಡುತ್ತಿದ್ದು, ಪ್ರತಿ ದಿನ ಮೂರರಿಂದ ಸರ್ಕಾರಕ್ಕೆ ನಾಲ್ಕು ಜನರು ಸಾವಿಗೀಡಾಗುತ್ತಿದ್ದಾರೆ.
ಪರೀಕ್ಷೆ ನಡೆಸಿದ ಪೈಕಿ ಶೇ.14 ರಷ್ಟು ಮಂದಿ ಯಲ್ಲಿ ಡೆಂಗ್ಯೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಬೇರೆ ರೋಗಗಳಿರುವ ವ್ಯಕ್ತಿ ಗಳಿಗೆ ಡೆಂಗ್ಯೂ ಬಂದರೆ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ. ಎಲ್ಲೆಡೆ ಕಸದ ರಾಶಿ ಇದೆ, ಮಳೆಯಿಂದಾಗಿ ಅಲ್ಲಲ್ಲಿ ನೀರು ಸಂಗ್ರಹ ವಾಗುತ್ತಿದೆ. ಆದರೂ ಸರ್ಕಾರ ಏನೂ ಕ್ರಮ ವಹಿಸಿಲ್ಲ ಎಂದು ದೂರಿದ್ದಾರೆ.