ಜನವರಿ 22 ರಂದು ರಜಾ ದಿನವನ್ನಾಗಿ ಘೋಷಣೆ ಮಾಡಿ: ಸಿಜೆಐಗೆ ಭಾರತೀಯ ವಕೀಲರ ಸಂಘದಿಂದ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಬಾಕಿ ಉಳಿದಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ.

ಇದರ ನಡುವೆ ಭಾರತೀಯ ವಕೀಲರ ಸಂಘ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಜನವರಿ 22 ರಂದು ರಜಾ ದಿನವನ್ನಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದೆ.

ತುರ್ತು ವಿಚಾರಣೆಯ ಅಗತ್ಯವಿರುವ ವಿಷಯಗಳನ್ನು ವಿಶೇಷ ವ್ಯವಸ್ಥೆಗಳ ಮೂಲಕ ಸರಿ ಹೊಂದಿಸಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ರಜಾದಿನವು ಅಯೋಧ್ಯೆಯಲ್ಲಿನ ಉದ್ಘಾಟನಾ ಸಮಾರಂಭಗಳು ಮತ್ತು ದೇಶಾದ್ಯಂತ ಇತರ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅಥವಾ ವೀಕ್ಷಿಸಲು ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗೆ ಅವಕಾಶ ನೀಡುತ್ತದೆ ಎಂದು ಬಾರ್ ಕೌನ್ಸಿಲ್ ಅಧ್ಯಕ್ಷರಾಗಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ರಜೆ ನೀಡಿದಲ್ಲಿ ದೇಶಾದ್ಯಂತದ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ನೌಕರರು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಸಮಾರಂಭ ಹಾಗೂ ಇದರ ಸಂಬಂಧಿತ ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗಲಿದೆ ಎಂದು ಮನವಿ ಮಾಡಿದ್ದಾರೆ. ಈ ಮನವಿಯನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿ ಈ ಐತಿಹಾಸಿಕ ಸಂದರ್ಭವನ್ನು ಜನರ ಭಾವನೆಗಳಿಗೆ ಅನುಗುಣವಾಗಿ ಆಚರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ವಿನಂತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!