ವಯನಾಡು ಭೂಕುಸಿತ ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಿ: ರಾಹುಲ್‌ ಗಾಂಧಿ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಕೇರಳದ ವಯನಾಡು ಭೀಕರ ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಎಂದು ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಸಂತ್ರಸ್ತರಿಗೆ ಹೆಚ್ಚು ಪರಿಹಾರ ನೀಡಬೇಕು. ದುರಂತ ಘಟಿಸಿದ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದೇನೆ. ಅಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ, ಅದಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಕೆಲವೆಡೆ ಕುಟುಂಬದವರೆಲ್ಲಾ ಮೃತಪಟ್ಟು, ಒಬ್ಬರು ಉಳಿದುಕೊಂಡಿದ್ದಾರೆ. ಮತ್ತೊಂದೆಡೆ ಮಕ್ಕಳು ಅನಾಥರಾಗಿದ್ದಾರೆ ಎಂದು ಹೇಳಿದರು.

ಇದೊಂದು ದೊಡ್ಡ ದುರಂತ. ಅಲ್ಲಿನ ಜನ ಜೀವನದ ಪುನರ್ವಸತಿಗೆ ಸಮಗ್ರ ಪ್ಯಾಕೇಜ್‌ ಘೋಷಿಸಬೇಕು. ಅವಘಡಗಳನ್ನು ಮೆಟ್ಟಿ ನಿಲ್ಲುವ ಮೂಲ ಸೌಕರ್ಯ ಒದಗಿಸಬೇಕು ಎಂದು ಹೇಳಿದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!