ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ, ಸಿದ್ದರಾಮಯ್ಯ ಹಿಟ್ಲರ್‌: ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

ಬಿಜೆಪಿ ಶಾಸಕರಾದ ಹರೀಶ್ ಪೂಂಜ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಶಾಸಕ, ಸಂಸದರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹಾಗೆಂದು ಕಾಂಗ್ರೆಸ್​ ನಾಯಕ ಐವನ್ ಡಿಸೋಜಾ ನೀಡಿದ ಹೇಳಿಕೆ ಮೇಲೆ ಕ್ರಮ ಆಗಲಿಲ್ಲ ಎಂದರು.

ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಎಸ್ಐಟಿ ಚಾರ್ಜ್​​ಶೀಟ್​​ನಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು.

ಗಣೇಶ ಮೂರ್ತಿಯನ್ನೇ ಪೊಲೀಸ್ ವ್ಯಾನ್​ನಲ್ಲಿ ಕರೆದುಕೊಂಡು ಹೋದರು. ಇದು ದೇಶದಲ್ಲೇ ಮೊದಲು. ಗಣಪತಿಗೇ ವಿಘ್ನ ಮಾಡಿದರು. ಚಪ್ಪಲಿ ಬಿಸಾಡಿದರು, ಕಲ್ಲು ಎಸೆದರು, 25 ಅಂಗಡಿ ಸುಟ್ಟು ಹಾಕಿದರು. ಅವರಿಗೆ ಎಲ್ಲಿಂದ ಶಕ್ತಿ ಬಂತು? ಕೇರಳದವರು ಬಂದಿದ್ದಾರೆ ಎಂದಬುದು ಗೊತ್ತಾಗಿದೆ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದರು

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!