ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವ ಪತ್ತೆಯಾಗಿದೆ.
ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ಸಿನ ಹಿಂದಿನ ಸೀಟಿನಲ್ಲಿ 40 ರಿಂದ 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಎನ್ನಲಾಗಿದೆ. ಎರಡು ವಾರಗಳ ಹಿಂದೆಯೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು. ಇದು ಕೊಲೆಯೋ ಅಥವಾ ಅಸಹಜ ಸಾವೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.