ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 29,616 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 31,382 ಇದ್ದ ಸೋಂಕಿತರ ಸಂಖ್ಯೆ ಇಂದು ಕೊಂಚ ಇಳಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 28,046 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,28,76,319ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,01,442ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 290 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,46,658ಕ್ಕೆ ಏರಿಕೆಯಾಗಿದೆ.