ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಚಿ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ ಕಡಿಮೆಯಾದ ಹಿನ್ನೆಲೆ ಜಿಲ್ಲೆಯ ಪ್ರವಾಸಿತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿ ಪ್ರವಾಸಿಗರ ಭೇಟಿಗೆ ಅನುಮತಿ ನೀಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲು ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಗುಡ್ಡ, ಭೂ ಕುಸಿತ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಭೇಟಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದೀಗ ವರುಣ ಬಿಡುವ ಕೊಟ್ಟ ಹಿನ್ನಲೆ ಜಿಲ್ಲೆಯ ಪ್ರವಾಸಿ ತಾಣಗಳಾದ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ದೇವರಮನೆ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ, ಎತ್ತಿನಭುಜ, ಸಿರಿಮನೆ ಫಾಲ್ಸ್, ಎತ್ತಿನ ಭುಜ, ದೇವರ ಮನೆ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಪ್ರವಾಸಿತಾಣಗಳಿಗೆ ಪ್ರವಾಸಿಗರ ಭೇಟಿಗೆ ಅನುಮತಿ ನೀಡಿದೆ.
ಈ ಭಾರೀ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ನೂರು ಕೋಟಿಗೂ ಅಧಿಕ ನಷ್ಟವಾಗಿದೆ. ಮೇ ತಿಂಗಳಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದರು. ಜುಲೈನಲ್ಲಿ ಅತಿ ಹೆಚ್ಚು ಮಳೆಯಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡಾ 25ರಷ್ಟು ಹೆಚ್ಚು ಮಳೆಯಾಗಿದೆ.