‘ಮಹಾದೇವ’ನಿಗೆ ಈ ಕ್ರೀಡಾಂಗಣ ಸಮರ್ಪಣೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಾರಣಾಸಿಯಲ್ಲಿ (Varanasi) ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ‘ಹರಹರ್ ಮಹಾದೇವ್’ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ‘ಮಹಾದೇವ’ ನಗರದ ಈ ಕ್ರೀಡಾಂಗಣವನ್ನು ‘ಮಹಾದೇವ’ನಿಗೆ ಸಮರ್ಪಿಸಲಾಗುವುದು. ಕಾಶಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣದಿಂದ ಇಲ್ಲಿನ ಕ್ರೀಡಾ ಪಟುಗಳಿಗೆ ಅನುಕೂಲವಾಗಲಿದೆ ಎಂದ ಅವರು, ಈ ಕ್ರೀಡಾಂಗಣ ಪೂರ್ವಾಂಚಲ ಪ್ರದೇಶದ ಸ್ಟಾರ್ ಆಗಲಿದೆ ಎಂದು ಹೇಳಿದ್ದಾರೆ.

ಒಂದು ಕಾಲದಲ್ಲಿ ಪೋಷಕರು ಮಕ್ಕಳು ಆಟವಾಡುತ್ತಿದ್ದದ್ದಕ್ಕೆ ಬೈಯುತ್ತಿದ್ದರು, ಆದರೆ ಅದು ಇನ್ನು ಮುಂದೆ ಹಾಗಾಗುವುದಿಲ್ಲ , ಒಂದು ಪ್ರದೇಶದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ನಿರ್ಮಿಸಿದಾಗ, ಅದು ಯುವ ಕ್ರೀಡಾ ಪ್ರತಿಭೆಗಳಿಗೆ ಮಾತ್ರವಲ್ಲದೆ ಸ್ಥಳೀಯ ಆರ್ಥಿಕತೆಗೆ ಉತ್ತೇಜನಕಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಇಂದು ಕ್ರೀಡೆಯಲ್ಲಿ ಭಾರತ ಕಾಣುತ್ತಿರುವ ಯಶಸ್ಸು ಕ್ರೀಡೆಯ ಬಗೆಗಿನ ದೃಷ್ಟಿಕೋನದಲ್ಲಿನ ಬದಲಾವಣೆಗೆ ಸಾಕ್ಷಿಯಾಗಿದೆ. ಸರ್ಕಾರ ಎಲ್ಲಾ ಹಂತದಲ್ಲೂ ಕ್ರೀಡಾಪಟುಗಳಿಗೆ ಸಹಾಯ ಮಾಡುತ್ತಿದೆ ಎಂದರು. .

ಬಳಿಕ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ಪ್ರಥಮ ಬಾರಿಗೆ ಉತ್ತರ ಪ್ರದೇಶದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾರಾಣಸಿಯ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ಕ್ರೀಡಾ ಉತ್ಸಾಹಿ ಪರವಾಗಿ ನಾನು ಪ್ರಧಾನಿ ಮೋದಿಯವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!