ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪನೆಗೊಂಡಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಹುತಾತ್ಮ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಲೋಕಾರ್ಪಣೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭಾವಹಿಸಿ, ಆಶೀರ್ವಚನ ನೀಡಿದರು.
ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀ ಡಾ .ಧರ್ಮ ಪಾಲನಾಥ ಸ್ವಾಮೀಜಿ, ಡಿ ವಿ ಸದಾನಂದ ಗೌಡ, ಸಚಿವ ಸಿ ಎನ್ ಅಶ್ವಥ್ ನಾರಾಯಣ, ಅಂಗಾರ , ಶಾಸಕರಾದ ಡಿ ವೇದವ್ಯಾಸ್ ಕಾಮತ್ , ಯು ಟಿ ಖಾದರ್, ಸಂಜೀವ ಮಠಂದೂರು, ಕೆ ಜಿ ಬೋಪ್ಪಯ್ಯ ,ಡಾ. ಭರತ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಯಂ ಬಿ ಕಿರಣ್ ಬುಡ್ಲೆಗುತ್ತು , ರಕ್ಷಿತ್ ಪುತ್ತಿಲ ಹಾಗೂ ಗಣ್ಯರು ಉಪಸ್ಥಿತರಿದ್ದರು.