ವಿಶ್ವಕಪ್‌ ನಿಂದ ದೀಪಕ್‌ ಚಾಹರ್‌ ಔಟ್: ಸಿರಾಜ್‌- ಶಮಿ- ಶಾರ್ದೂಲ್‌.. ಬೂಮ್ರಾ ಸ್ಥಾನ ತುಂಬಲಿದ್ದಾರೆ ಈ ಮೂವರಲ್ಲೊಬ್ಬರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಭಾರತದ ವೇಗದ ಬೌಲರ್ ದೀಪಕ್ ಚಹಾರ್ 2022 ರ T20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. ಅವರು ಪಂದ್ಯಾವಳಿಗೆ ಆಸ್ಟ್ರೇಲಿಯಾಕ್ಕೆ ಹಾರುವುದಿಲ್ಲ ಎಂದು ‘ಸ್ಪೋರ್ಟ್ಸ್ ಟಾಕ್’ ವರದಿ ಮಾಡಿದೆ. ಮೀಸಲು ಆಟಗಾರನ ಪಟ್ಟಿಯಲ್ಲಿದ್ದ ದೀಪಕ್‌ ಚಾಹರ್‌ ರನ್ನು ಗಾಯದ ಕಾರಣದಿಂದಾಗಿ ತಂಡದಿಂದ ಕೈಬಿಡಲಾಗಿದ್ದು ಅವರ ಸ್ಥಾನದಲ್ಲಿ ಶಾರ್ದೂಲ್‌ ಠಾಕೂರ್‌ ಮೀಸಲು ಆಟಗಾರರ ಪಟ್ಟಿಯಲ್ಲಿ ಪ್ರವೇಶ ಪಡೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ವೇಗಿ ಚಾಹಾರ್ ಪಾದದ ಗಾಯದಿಂದಾಗಿ ಸೌತ್‌ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಏತನ್ಮಧ್ಯೆ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಠಾಕೂರ್ ಅವರು ಮೂವರು ಗುರುವಾರ ಆಸ್ಟ್ರೇಲಿಯಾಕ್ಕೆ ಹಾರಲು ಸಿದ್ಧರಾಗಿದ್ದಾರೆ. ಈ ಮೂವರು ವೇಗಿಗಳು ಅಲ್ಲಿ ಟೀಂ ಇಂಡಿಯಾ ತಂಡವನ್ನು ಸೇರಿಕೊಳ್ಳಲಿದ್ದಾರೆ. T20 ವಿಶ್ವಕಪ್‌ಗೆ ಸ್ಥಾನಪಡೆದಿರುವ ಆಟಗಾರರು ಪರ್ತ್‌ನಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಸದ್ಯಕ್ಕೆ ಟಿ20 ವಿಶ್ವಕಪ್ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಸ್ಥಾನದಲ್ಲಿ ಬಿಸಿಸಿಐ ಬದಲಿ ಆಟಗಾರನನ್ನು ಹೆಸರಿಸಿಲ್ಲ.
ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನಗಳಿಸಬೇಕಾದರೆ ಬೆಂಗಳೂರಿನ ಎನ್‌ಸಿಎಯಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಸಾಗಬೇಕಿದೆ. ಆದರೆ, ಈ ನಡುವೆ ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ 20 ಸರಣಿಯಲ್ಲಿ ಸಿರಾಜ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಭಾರತ ಮೂರು ಪಂದ್ಯಗಳ ಸರಣಿಯನ್ನು  ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಬೂಮ್ರಾ ಸ್ಥಾನದಲ್ಲಿ ಸಿರಾಜ್‌ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ವರದಿಗಳು ಹೇಳುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!