Saturday, January 3, 2026

ಡೀಪ್‌ಫೇಕ್ ಕಾಟ ರಾಷ್ಟ್ರಪತಿ–ಪ್ರಧಾನಿಯನ್ನೂ ಬಿಟ್ಟಿಲ್ಲ: ನಕಲಿ AI ವಿಡಿಯೋ ಶೇರ್, ಓರ್ವನ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಮಾಧ್ಯಮದಲ್ಲಿ ಎಐ ತಂತ್ರಜ್ಞಾನವನ್ನು ದುರುಪಯೋಗ ಮಾಡಿಕೊಂಡು ರಾಷ್ಟ್ರದ ಉನ್ನತ ಹುದ್ದೆಗಳನ್ನು ಗುರಿಯಾಗಿಸಿಕೊಂಡು ಫೇಕ್ ವಿಡಿಯೋ ತಯಾರಿಸಿದ ಪ್ರಕರಣವೊಂದು ಬಯಲಾಗಿದೆ. ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಯ ಧ್ವನಿ, ಚಿತ್ರ ಮತ್ತು ಹೆಸರನ್ನು ಬಳಸಿ ನಕಲಿ ವೀಡಿಯೊಗಳನ್ನು ಸೃಷ್ಟಿಸಿ ಹರಡಿದ ಆರೋಪದಡಿ ಮುಜಫರ್ಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಪ್ರಮೋದ್ ಕುಮಾರ್ ಎಂದು ಗುರುತಿಸಲಾಗಿದೆ.

ಜನವರಿ 2, 2026ರಂದು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯಂತೆ ಕಾಣುವ ಹಾಗೂ ಕೇಳಿಸುವ ಡೀಪ್‌ಫೇಕ್ ವೀಡಿಯೊಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯವು ಸಾರ್ವಜನಿಕರನ್ನು ದಾರಿತಪ್ಪಿಸುವ ಉದ್ದೇಶ ಹೊಂದಿದ್ದು, ದೇಶದ ಅತ್ಯುನ್ನತ ಹುದ್ದೆಗಳ ಗೌರವ, ವಿಶ್ವಾಸಾರ್ಹತೆ ಮತ್ತು ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ಮುಜಫರ್ಪುರ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲು ಎಸ್‌ಎಸ್‌ಪಿ ನಿರ್ದೇಶನ ನೀಡಿದ್ದಾರೆ. ಆರೋಪಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, 01/26ರಂತೆ ಪ್ರಕರಣ ದಾಖಲಾಗಿದೆ.

error: Content is protected !!