ತೀರ್ಪುಗಾರ್ತಿಯಾಗಿ ದೀಪಿಕಾ ಪಡುಕೋಣೆ: ಕೇನ್ಸ್‌ ಚಲನಚಿತ್ರೋತ್ಸವದಿಂದ ಅದ್ದೂರಿ ಗೌರವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಾಲಿವುಡ್ ಸ್ಟಾರ್ ಹೀರೋಯಿನ್ ದೀಪಿಕಾ ಪಡುಕೋಣೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಲವಾರು ಅಂತರಾಷ್ಟ್ರೀಯ ಸಿನಿಮಾ ಸಮಾರಂಭಗಳಲ್ಲಿ ಭಾಗವಹಿಸಿರುವ ದೀಪಿಕಾಗೆ ಇದೀಗ ಅಪರೂಪದ ಗೌರವವೊಂದು ಲಭಿಸಿದೆ. ಕಳೆದ ಕೆಲವು ವರ್ಷಗಳಿಂದ ಕೇನ್ಸ್ ಚಲನಚಿತ್ರೋತ್ಸವದಲ್ಲಿ ರೆಡ್ ಕಾರ್ಪೆಟ್‌ನ ಭಾಗವಾಗಿದ್ದ ದೀಪಿಕಾ ಪಡುಕೋಣೆ ಈ ಬಾರಿ ಮತ್ತಷ್ಟು ಗೌರವಕ್ಕೆ ಪಾತ್ರರಾಗಿದ್ದಾರೆ.

ಮುಂದಿನ ತಿಂಗಳು ಆರಂಭವಾಗಲಿರುವ 75ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ದೀಪಿಕಾ ಪಡುಕೋಣೆ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಫ್ರೆಂಚ್ ನಟ ವಿನ್ಸೆಂಟ್ ಲಿಂಡನ್ ಅವರು ಕೇನ್ಸ್ ಚಲನಚಿತ್ರೋತ್ಸವದ 75 ನೇ ಆವೃತ್ತಿಯ ತೀರ್ಪುಗಾರರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಇದರಲ್ಲಿ ದೀಪಿಕಾ ಕೂಡಾ ಒಬ್ಬರಾಗಿದ್ದ ಭಾರತ ಸಿನಿ ರಂಗಕ್ಕೆ ಹೆಮ್ಮೆಯ ಸಂಗತಿಯಾಗಿದೆ. ದೀಪಿಕಾ ಜೊತೆಗೆ ರೆಬೆಕಾ ಹಾಲ್, ನುಮಿ ರೇಪ್ಸ್, ಜಾಸ್ಮಿನ್ ಟ್ರಿಂಕಾ, ಅಸ್ಗರ್ ಫರ್ಹಾದಿ, ಲಾಡ್ಜ್ ಲೈ, ಜೆಫ್ ನಿಕೋಲ್ಸ್ ಮತ್ತು ಜೋಕಿಮ್ ಟ್ರೈಯರ್ ಇದ್ದಾರೆ.

ಮೇ 17 ರಿಂದ 10 ದಿನಗಳ ಕಾಲ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮೇ 28 ರಂದು ಕೇನ್ಸ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ದೀಪಿಕಾ ಪಡುಕೋಣೆ ಮುಂದಿನ ಹತ್ತು ದಿನಗಳ ಕಾಲ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಜ್ಯೂರಿ ಸದಸ್ಯರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!