ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬದವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಅವರ ತಂದೆ ಹಾಗೂ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೂ ಪಾಸಿಟಿವ್ ಬಂದಿದ್ದು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
10 ದಿನಗಳ ಹಿಂದೆ ಪ್ರಕಾಶ್ ಮತ್ತು ಅವರ ಪತ್ನಿ ಉಜ್ವಲಾ ಹಾಗೂ ಎರಡನೇ ಪುತ್ರಿ ಅನಿಷಾ ಅವರಿಗೆ ರೋಗ ಲಕ್ಷಣ ಕಂಡು ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ.
ಒಂದು ವಾರ ಪ್ರತ್ಯೇಕವಾಗಿದ್ದ ಪ್ರಕಾಶ್ ಅವರು ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಇನ್ನು ಎರಡು-ಮೂರು ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ. ಅವರ ಪತ್ನಿ ಮತ್ತು ಪುತ್ರಿ ಮನೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಲಾಗಿದೆ.