May 25, 2026
Monday, May 25, 2026
spot_img

CINE | ‘ರಾಕಾ’ ಚಿತ್ರದಿಂದ ದೀಪಿಕಾ ಔಟ್? ವದಂತಿಗಳಿಗೆ ಬ್ರೇಕ್ ಹಾಕಿದ ಚಿತ್ರತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ನ ‘ಮಸ್ತಾನಿ’ ದೀಪಿಕಾ ಪಡುಕೋಣೆ ಸದ್ಯ ವೈಯಕ್ತಿಕ ಜೀವನದ ಸುಂದರ ಹಂತದಲ್ಲಿದ್ದಾರೆ. ಎರಡನೇ ಬಾರಿಗೆ ತಾಯಿಯಾಗುತ್ತಿರುವ ಸಂಭ್ರಮದಲ್ಲಿರುವ ದೀಪಿಕಾ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಒಂದಿಷ್ಟು ನೆಗೆಟಿವ್ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಅವರು ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ‘ರಾಕಾ’ದಿಂದ ಅವರನ್ನು ಕೈಬಿಡಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಈ ಎಲ್ಲಾ ಗಾಸಿಪ್‌ಗಳಿಗೆ ಚಿತ್ರತಂಡ ಅಧಿಕೃತವಾಗಿಯೇ ತೆರೆ ಎಳೆದಿದೆ.

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಮಾಸ್ ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಕಾ’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರನಡೆದಿದ್ದಾರೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಗರ್ಭಿಣಿಯಾಗಿರುವ ಕಾರಣ ಅವರ ಪಾತ್ರಕ್ಕೆ ಕತ್ತರಿ ಹಾಕಲಾಗುತ್ತಿದೆ ಎಂಬ ವರದಿಗಳು ಕೇವಲ ಆಧಾರರಹಿತ ವದಂತಿಗಳಷ್ಟೇ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

“ದೀಪಿಕಾ ಅವರ ಪಾತ್ರ ಸಿನಿಮಾದಲ್ಲಿ ಅತ್ಯಂತ ನಿರ್ಣಾಯಕವಾಗಿದೆ. ಅವರ ಕಾಲ್‌ಶೀಟ್ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ,” ಎಂದು ಚಿತ್ರತಂಡದ ಆಪ್ತ ಮೂಲಗಳು ಖಚಿತಪಡಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !