ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ಪಾಕಿಸ್ತಾನ (Pakistan) ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಹಾಗೂ ಅಫ್ಘಾನಿಸ್ತಾನದ ತಾಲಿಬಾನ್‌ನ (Taliban) ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂತಾಪ ಸೂಚಿಸಿದೆ.
ಭಾರತದ ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಹೆಚ್ಚಿನ ಸಾವು ನೋವಾಗಿರುವುದು ತಿಳಿದು ದುಃಖವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ. ರೈಲು ದುರಂತದಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹೇಳಿವೆ..