‘ಪರಿಸರ ಸಂರಕ್ಷಣೆಯ ದಾರಿದೀಪವಾಗಿದ್ದ ತುಳಸಿ ಗೌಡ ನಿಧನದಿಂದ ತೀವ್ರ ದುಃಖವಾಗಿದೆ’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ, ಪುರಸ್ಕೃತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ದಾರಿದೀಪವಾಗಿದ್ದ ತುಳಸಿ ಗೌಡ ಅವರ ಜೀವನ ನಮಗೆಲ್ಲ ಪ್ರೇರಣೆಯಾಗಲಿ ಎಂದು ಮೋದಿ ಸಂತಾಪ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಖ್ಯಾತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸುವುದಕ್ಕಾಗಿ ಅವರು ಜೀವನವನ್ನೇ ಮುಡಿಪಾಗಿಟ್ಟರು.

ಪರಿಸರ ಸಂರಕ್ಷಣೆ ವಿಚಾರದಲ್ಲಿ ಅವರು ಇನ್ನು ಮುಂದೆಯೂ ನಮಗೆ ದಾರಿದೀಪವಾಗಿ ಇರಲಿದ್ದಾರೆ. ಈ ಭೂಮಿಯ ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ತುಳಸಿ ಗೌಡ ಅವರ ಕೆಲಸಕಾರ್ಯಗಳು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿಯಾಗಲಿ. ಅವರ ನಿಧನಕ್ಕೆ ಸಂತಾಪಗಳು. ಓಂ ಶಾಂತಿಃ ಎಂದು ಮೋದಿ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!