ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ನಮಗೆಲ್ಲ ಆದರ್ಶಪ್ರಾಯ ರಾಜಕಾರಣಿ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸ್ಮರಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಪದ್ಮ ವಿಭೂಷಣ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತೀವ್ರ ದುಃಖವಾಗಿದೆ ಎಂದಿದ್ದಾರೆ.
ರಾಜಕಾರಣದಲ್ಲಿ ಅತ್ಯಂತ ಶಾಂತ ಸ್ವಭಾವದ, ಸಜ್ಜನ ನಾಯಕರಾಗಿದ್ದರು. ಹಿರಿಯ ನಾಯಕರಾಗಿದ್ದ ಅವರು ನಮಗೆಲ್ಲರಿಗೂ ಆದರ್ಶಪ್ರಾಯ. ಭಗವಂತ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.