ಮಾನನಷ್ಟ ಪ್ರಕರಣ: ಬಂಧನಕ್ಕೀಡಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು ಸಿಕ್ಕಿದೆ.

ಮಾನನಷ್ಟ ಪ್ರಕರಣದಲ್ಲಿ ನಿನ್ನೆಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಬಂಧಿಸಲಾಗಿತ್ತು. ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕೆಂಪಣ್ಣ ಸೇರಿ ಒಟ್ಟು 19 ಗುತ್ತಿಗೆದಾರರು ಸುದ್ದಿಗೋಷ್ಠಿ ಮಾಡಿ ತೋಟಗಾರಿಕಾ ಸಚಿವ ಮುನಿರತ್ನವಿರುದ್ಧ ಕಮೀಷನ್ ಆರೋಪ ಮಾಡಿದ್ದರು. ಈ ಸಂಬಂಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕೆಂಪಣ್ಣ ಸೇರಿ 19 ಗುತ್ತಿಗೆದಾರರ ವಿರುದ್ಧ ಮುನಿರತ್ನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹಾಕಿದ್ದರು.

8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ಸೇರಿ 19 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಪೊಲೀಸರು ಆರೋಪಿಗಳಾದ ಕೆಂಪಣ್ಣ ಮತ್ತು ಇತರರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ರಾತ್ರಿ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಕೆಂಪಣ್ಣ, ಕೃಷ್ಣಾರೆಡ್ಡಿ, ನಟರಾಜು, ಗುರುಸಿದ್ದಪ್ಪ, ಅಂಬಿಕಾಪತಿ ಸೇರಿ ಐವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!