ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದು ಪದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ವಜಾಗೊಳಿಸಿದೆ.
‘ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದ’ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ಸಂಬಂಧ ಲೋಕೋಪಯೋಗಿ ಸಚಿವ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.
ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.