ಮಾನಹಾನಿ ಪ್ರಕರಣ: ಮೇ 2ರಂದು ಗುಜರಾತ್ ಹೈಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿಯ ಅಂತಿಮ ವಿಚಾರಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೋದಿ ಉಪನಾಮ ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಅವರ ಅರ್ಜಿಯ ವಿಚಾರಣೆ ಇಂದು ಗುಜರಾತ್ ಹೈ ಕೋರ್ಟ್ ನಲ್ಲಿಲ್ಲಿ ಪ್ರಾರಂಭವಾಯಿತು. ಈ ವೇಳೆ ರಾಹುಲ್ ಪರ ವಕೀಲರು ಶಿಕ್ಷೆಗೆ ತಡೆಯಾಜ್ಞೆ ನೀಡಲು ಆರು ಮೂಲಭೂತ ಆಧಾರಗಳನ್ನು ಮಂಡಿಸಿದರು. ಈ ಪ್ರಕರಣದ ಮುಂದಿನ ವಿಚಾರಣೆ ಮೇ 2ರಂದು ನಡೆಯಲಿದೆ.

ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರು ವಿಚಾರಣೆ ನಡೆಸಿದ್ದು ಈ ವೇಳೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಾಹುಲ್ ಪರ ತಮ್ಮ ವಾದವನ್ನು ಮಂಡಿಸಿದ್ದು ಶಿಕ್ಷೆಗೆ ತಡೆ ನೀಡುವಂತೆ ಒತ್ತಾಯಿಸಿದರು. ಸುಮಾರು ಒಂದೂವರೆ ಗಂಟೆಗಳ ಸುದೀರ್ಘ ವಾದದಲ್ಲಿ, ಸಿಂಘ್ವಿ ಸೂರತ್ ನ್ಯಾಯಾಲಯ ನೀಡಿದ ಶಿಕ್ಷೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು. ಸಿಂಘ್ವಿ ಹಲವು ಪ್ರಕರಣಗಳ ಉಲ್ಲೇಖಗಳನ್ನು ಮಂಡಿಸಿದರು. ಹೈಕೋರ್ಟ್ನಲ್ಲಿ ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಈ ಪ್ರಕರಣದಲ್ಲಿ ಅರ್ಜಿದಾರ ಪೂರ್ಣೇಶ್ ಮೋದಿ ಪರವಾಗಿ ವಾದ ಮಂಡಿಸುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!